HomeCrimeನಿವೃತ್ತ ಯೋಧನ ಬರ್ಬರ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಹತ್ಯೆಗೈದ ಬಾಮೈದ

ನಿವೃತ್ತ ಯೋಧನ ಬರ್ಬರ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಹತ್ಯೆಗೈದ ಬಾಮೈದ

ಬೆಳಗಾವಿ: ಚಾಕುವಿನಿಂದ ಕತ್ತು ಸೀಳಿ ಬಾಮೈದನೊಬ್ಬ ಭಾವನನ್ನೇ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ವಿದ್ಯಾನಗರದಲ್ಲಿ ನಡೆದಿದೆ.

ಮನೆಯಲ್ಲೇ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೃತ್ಯವೆಸಗಿದ್ದಾನೆ. ಈರಗೌಡ ಸೇನೆಯಿಂದ ನಿವೃತ್ತಿಯಾದ ನಂತರ ಕ್ರಷರ್ ನಡೆಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈರಗೌಡ ಮೂಲತಃ ಜೈನಾಪುರ ಗ್ರಾಮದವರಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಸ್ಥಳಾಂತರ ಮಾಡಲಾಗಿದ್ದು, ಕುಟುಂಬದವರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular