ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ ಧನಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವರು ಸತತ ಮೂರೂ ಬಾರಿ ಗ್ರಾಪಂ ಸದಸ್ಯರಾಗಿದ್ದರು. ಬಿಜೆಪಿ ಮುಖಂಡರಾಗಿದ್ದ ಮಹಾಂತಪ್ಪ ಅವರ ಮೇಲೆ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾದನಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read