HomeKarnatakaನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದು, ವೀರಶೈವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಒತ್ತಾಯಿಸುವುದಾಗಿ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಕಲ್ಲೇಶಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular