HomeKarnatakaಐಐಎಸ್‌ಸಿ ನಿವೃತ್ತ ಪ್ರಾಧ್ಯಾಪಕರ ಕುಟುಂಬದ ಮೂವರ ಕೊಲೆ ಕೇಸ್: ದಂಪತಿ ಸೇರಿದಂತೆ ನಾಲ್ವರು ವಲಸೆ ಕಾರ್ಮಿಕರಿಗೆ...

ಐಐಎಸ್‌ಸಿ ನಿವೃತ್ತ ಪ್ರಾಧ್ಯಾಪಕರ ಕುಟುಂಬದ ಮೂವರ ಕೊಲೆ ಕೇಸ್: ದಂಪತಿ ಸೇರಿದಂತೆ ನಾಲ್ವರು ವಲಸೆ ಕಾರ್ಮಿಕರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: 7 ವರ್ಷದ ಹಿಂದೆ ಐಎಎಸ್‌ಸಿ ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ್ ಲಾಲ್ ಸಚ್ ದೇವ್(71), ಪತ್ನಿ ರೀಟಾ(65) ಮತ್ತು ಪುತ್ರ ಮುನ್ನಾ(35) ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕರಿಗೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಪಶ್ಚಿಮ ಬಂಗಾಳದ ದೀಪಕ್ ಹಲ್ದಾರ್,  ಆತನ ಪತ್ನಿ ಸುಚಿತ್ರಾ, ಮುಜಾಫರ್ ನಗರ ಮೂಲದ ಮೊಹಮ್ಮದ್ ಸರ್ಬಲ್ ಮತ್ತು ಬಿದನ್ ಜೀವಾವಧಿ ಶಿಕ್ಷೆಗೆ ಒಳಗಾದವರು.

ಆರೋಪಿಗಳನ್ನು ಖುಲಾಸೆಗೊಳಿಸಿದ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಪರಿಗಣಿಸಿದ ಹೈಕೋರ್ಟ್ ವಿಭಾಗೀಯ ಪೀಠ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠದಿಂದ ಈ ತೀರ್ಪು ನೀಡಲಾಗಿದೆ.

ಆರೋಪಿಗಳು ಹಣ, ಚಿನ್ನಾಭರಣಕ್ಕಾಗಿ ನಿವೃತ್ತ ಪ್ರಾಧ್ಯಾಪಕ ಸೇರಿ ಮೂವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದರು. ದೀಪಕ್ ಮತ್ತು ಸುಚಿತ್ರಾ ಮನೆ ಕೆಲಸದವರಾಗಿದ್ದರು. ಹಣ ಚಿನ್ನಾಭರಣದ ಆಸೆಗಾಗಿ ಅಮಾಯಕರನ್ನು ಕೊಲೆ ಮಾಡಿರುವುದು ಅತ್ಯಂತ ಗಂಭೀರ ಅಪರಾಧವಾಗಿದೆ. ಸಮಾಜದ ಶಾಂತಿ, ಸಹ ಬಾಳ್ವೆಗೆ ಇಂತಹ ಕೃತ್ಯ ಧಕ್ಕೆ ತರುತ್ತವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಮನೆಯೊಳಗೆ ಕೆಲಸಕ್ಕೆ ನೇಮಿಸಿಕೊಳ್ಳುವ ಕಾರ್ಮಿಕರ ಬಗ್ಗೆ ಪೊಲೀಸ್ ವೆರಿಫಿಕೇಶನ್ ನಡೆಸುವುದು ಅಗತ್ಯವಾಗಿದೆ. ಅವರ ಹಿನ್ನೆಲೆಯ ಸಮಗ್ರ ಮಾಹಿತಿ ಪರಿಶೀಲಿಸುವ ವ್ಯವಸ್ಥೆ ಅಗತ್ಯವಿದ್ದು, ಇದಕ್ಕಾಗಿ ಸುಲಭವಾದ ಆನ್ ಲೈನ್ ಪರಿಶೀಲನಾ ವ್ಯವಸ್ಥೆ ತರಬೇಕಿದೆ. ಪರಿಶೀಲನೆ ಪ್ರಕ್ರಿಯೆಯ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದ್ದು, ತೀರ್ಪಿನ ಪ್ರತಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಲು ಆದೇಶಿಸಿದೆ.

2009ರ ಫೆಬ್ರವರಿ 16ರಂದು ಬೆಂಗಳೂರಿನ ಆರ್.ಟಿ. ನಗರದಲ್ಲಿ ಐಎಎಸ್‌ಸಿ ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ್, ಅವರ ಪತ್ನಿ ರೀಟಾ, ಪುತ್ರ ಮುನ್ನಾ 35 ಅವರನ್ನು ಕೊಲೆ ಮಾಡಲಾಗಿತ್ತು

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular