HomeKarnatakaಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ.

ಇದೇ ಗ್ರಾಮದ ಗೋವಿಂದ, ಕರಿಯ ವಿರುದ್ಧ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ರಾಘವೇಂದ್ರನನ್ನು ಕೊಲೆ ಮಾಡಿ ನಾಲೆಯ ಸಮೀಪ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ರಾಘವೇಂದ್ರ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ರಾಘವೇಂದ್ರನನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ರಾಘವೇಂದ್ರ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ಹೊರ ಹೋದವರು ವಾಪಸ್ ಬಂದಿರಲಿಲ್ಲ. ಈಗ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ರಾಘವೇಂದ್ರ ಕತ್ತು, ಮುಖದ ಮೇಲೆ ಗಾಯದ ಗುರುತು ಪತ್ತೆಯಾಗಿದೆ. ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular