HomeCrimeಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ

ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ

ಧಾರವಾಡ: ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ ನಡೆದಿದೆ. ನವೆಂಬರ್ 13ರಂದು ಅಡಿವೆಪ್ಪ ಅವರನ್ನು ಕೊಲೆ ಮಾಡಲಾಗಿತ್ತು. ಪೊಲೀಸ್ ತನಿಖೆಯಲ್ಲಿ ಪುತ್ರನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದಲ್ಲಿ ಘಟನೆ ನಡೆದಿತ್ತು. ಮನೆ ಪಕ್ಕದ ಶೆಡ್ ನಲ್ಲಿ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ತಂದೆಯನ್ನು ಪುತ್ರ ಶಿವಯೋಗಿ ಕೊಲೆ ಮಾಡಿದ್ದು, ಯಾರೋ ಕೊಲೆ ಮಾಡಿ ಹೋಗಿದ್ದಾರೆ ಎಂದು ಹೇಳಿದ್ದ. ಆದರೆ ಪೊಲೀಸರ ತನಿಖೆಯಲ್ಲಿ ಮಗನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಹಿರಿಯ ಮಗ ಶಿವಯೋಗಿಯೇ ಅಡಿವೆಪ್ಪನನ್ನು ಕೊಲೆ ಮಾಡಿದ್ದಾನೆ. ಗ್ರಾಮದ ಮಹಿಳೆಯೊಂದಿಗೆ ಶಿವಯೋಗಿ ಅನೈತಿಕ ಸಂಬಂಧ ಹೊಂದಿದ್ದ. ಪುತ್ರನ ಅನೈತಿಕ ಸಂಬಂಧಕ್ಕೆ ತಂದೆ ಅಡಿವೆಪ್ಪ ವಿರೋಧಿಸಿದ್ದರು. ಮಗನ ಮದುವೆಗೆ ಅಡಿವೆಪ್ಪ ತಯಾರಿ ನಡೆಸಿದ್ದು, ಹೆಣ್ಣು ನೋಡಲು ಹೊರಟಿದ್ದ ದಿನವೇ ಪುತ್ರ ಶಿವಯೋಗಿ ತಂದೆಯನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular