HomeCrimeತಂದೆಯನ್ನೇ ಕೊಂದು ಮೃತದೇಹ ಬಾವಿಗೆ ಎಸೆದ ಪುತ್ರ

ತಂದೆಯನ್ನೇ ಕೊಂದು ಮೃತದೇಹ ಬಾವಿಗೆ ಎಸೆದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬ್ಯಾಕೋಡು ಸಮೀಪದ ಗೊರಗೋಡು ಗ್ರಾಮದಲ್ಲಿ ಮಂಗಳವಾರ ವ್ಯಕ್ತಿಯೊಬ್ಬ ತಂದೆಯನ್ನೇ ಕೊಲೆ ಮಾಡಿದ್ದಾನೆ. ಕೊಲೆಗೈದ ನಂತರ ಮೃತದೇಹವನ್ನು ಚಿಕ್ಕಪ್ಪನ ಜಮೀನಿನ ಬಾವಿಗೆ ಎಸೆದಿದ್ದಾನೆ.

ಸುಬ್ರಾಯ(55) ಮೃತಪಟ್ಟವರು. ಮಗ ಜಯಂತ್ ಕೊಲೆ ಆರೋಪಿಯಾಗಿದ್ದಾನೆ. ತಂದೆ ಸುಬ್ರಾಯ ಅವರೊಂದಿಗೆ ಜಗಳವಾಡಿದ ಜಯಂತ್ ಕೈ ಮತ್ತು ಕೋಲಿನಿಂದ ಹೊಡೆದು ಕೊಲೆ ಮಾಡಿ ಚಿಕ್ಕಪ್ಪನ ಗದ್ದೆಯಲ್ಲಿದ್ದ ಬಾವಿಗೆ ಮೃತದೇಹ ತಳ್ಳಿದ್ದಾನೆ.

ಮೃತ ಸುಬ್ರಾಯ 2010ರಲ್ಲಿ ತನ್ನ ತಂದೆ ಮತ್ತು ತಂಗಿಯನ್ನು ಕೊಲೆ ಮಾಡಿ 14 ವರ್ಷ ಜೈಲಿನಲ್ಲಿದ್ದು 2023ರಲ್ಲಿ ಬಿಡುಗಡೆಯಾಗಿದ್ದ. ಜೈಲಿನಿಂದ ಬಂದು ಒಂದು ತಿಂಗಳಲ್ಲೇ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ್ದ. ಈ ಕುರಿತು ಮಗ ಜಯಂತ್ ನೀಡಿದ ಕೊಲೆ ಯತ್ನ ದೂರಿನ ಮೇರೆಗೆ ಸುಬ್ರಾಯ ಮತ್ತೆ ಜೈಲಿಗೆ ಹೋಗಿದ್ದು, ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಊರಿಗೆ ಬಾರದೇ ಬೇರೆ ಊರಿನಲ್ಲಿ ನೆಲೆಸಿದ್ದ. ಐದು ದಿನಗಳ ಹಿಂದೆ ಊರಿಗೆ ಬಂದಿದ್ದ ಎನ್ನಲಾಗಿದೆ. ತಂದೆ ಮಗನ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡ ಕಾರ್ಗಲ್ ಠಾಣೆ ಪೋಲೀಸರು ಆರೋಪಿ ಜಯಂತ್ ನನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular