HomeKarnatakaಅಣ್ಣ -ತಂಗಿ ಅಕ್ರಮ ಸಂಬಂಧದ ಅನುಮಾನ: ಪತಿಯಿಂದಲೇ ಘೋರ ಕೃತ್ಯ

ಅಣ್ಣ -ತಂಗಿ ಅಕ್ರಮ ಸಂಬಂಧದ ಅನುಮಾನ: ಪತಿಯಿಂದಲೇ ಘೋರ ಕೃತ್ಯ

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಅಕ್ಟೋಬರ್ 8ರಂದು ನಡೆದ ಜೋಡಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಂದೀಶ್ ಹಾಗೂ ಆತನ ತಂದೆ ಜಾತಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಕೊಟ್ಟೂರಿನ ಕಾವ್ಯಾ ಅವರನ್ನು ಚಿಗಟೇರಿಯ ನಂದೀಶ್ ಜೊತೆ ಮದುವೆ ಮಾಡಲಾಗಿತ್ತು. ಕಾವ್ಯಾ ಹಾಗೂ ಆಕೆಯ ಅಣ್ಣ ಕೊಟ್ರೇಶ್ ನಡುವೆ ಅಕ್ರಮ ಸಂಬಂಧ ಇದೆ ಎಂದು ಪತ್ನಿಯ ಶೀಲ ಶಂಕಿಸಿದ ನಂದೀಶ ತಂದೆಯೊಂದಿಗೆ ಸೇರಿ ಇಬ್ಬರನ್ನು ಕೊಲೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 8ರಂದು ಇಬ್ಬರ ಮೃತ ದೇಹಗಳು ಪತ್ತೆಯಾಗಿದ್ದವು. ಅವರು ಅಣ್ಣ ತಂಗಿ ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ನಂದೀಶ ಹಾಗೂ ಜಾತಪ್ಪ ಚಿಗಟೇರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಗಟೇರಿ ಪೊಲೀಸರು ಶವ ಪರಿಶೀಲನೆ ನಡೆಸಿದಾಗ ಕೊಲೆಯಾದ ಸಂಶಯ ವ್ಯಕ್ತವಾಗಿದೆ.

ಮೃತ ಕಾವ್ಯಾ ಅವರ ತಾಯಿ ಬಸಮ್ಮ ಅವರಿಂದ ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ನಡೆದ 12 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಕಾವ್ಯಾ ಮತ್ತು ಕೊಟ್ರೇಶ್ ನಡುವೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ತಂದೆ ಜಾತಪ್ಪನೊಂದಿಗೆ ಸೇರಿ ನಂದೀಶ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular