HomeKarnatakaCRIME NEWS : ರಾಮನಗರದಲ್ಲಿ ಘೋರ ಘಟನೆ : ಗುದ್ದಲಿಯಿಂದ ಹೊಡೆದು ಮಗಳಿಂದಲೇ ತಂದೆಯ ಹತ್ಯೆ

CRIME NEWS : ರಾಮನಗರದಲ್ಲಿ ಘೋರ ಘಟನೆ : ಗುದ್ದಲಿಯಿಂದ ಹೊಡೆದು ಮಗಳಿಂದಲೇ ತಂದೆಯ ಹತ್ಯೆ

ರಾಮನಗರ : ಮಗಳೇ ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಮೃತನನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಘಟನೆ ನಡೆದಿದೆ.
ಗಂಡನನ್ನು ಬಿಟ್ಟು ಬಂದ ಪುಷ್ಪ ತಂದೆ ಮನೆಯಲ್ಲಿ ವಾಸವಿದ್ದಳು. ಆದರೆ ಕೆಲವು ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಕ್ಷುಲ್ಲಕ ಕಾರಣಕ್ಕೆ ತಂದೆ-ಮಗಳ ನಡುವೆ ಜಗಳ ನಡೆದಿದ್ದು, ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದಿದ್ದಾಳೆ. ಪರಿಣಾಮ ಹುಚ್ಚೀರಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular