ಎದೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ

ಕಲಬುರಗಿ: ಎದೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ.

ಮರಲಿಂಗಪ್ಪ ಕೆಳಗೇರಿ(67) ಕೊಲೆಯಾದ ವ್ಯಕ್ತಿ. ಮಂಗಳವಾರ ಸಂಜೆ 7 ಗಂಟೆಗೆ ಪುತ್ರ ಮರಿಯಪ್ಪ ಕೆಳಗೇರಿ ಜೊತೆ ಮೃತ ಮರಲಿಂಗಪ್ಪ ಅವರು ವಾಡಿಯಿಂದ ಚಾಮನೂರು ಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಮರಲಿಂಗಪ್ಪ ಅವರ ಸೊಸೆಯ ಕುಟುಂಬದ ಸಂಬಂಧಿಕರು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ.

ಇದರಿಂದಾಗಿ ತಂದೆ, ಮಗ ಇಬ್ಬರೂ ಬೈಕ್ ನಿಂದ ರಸ್ತೆ ಮೇಲೆ ಬಿದ್ದಿದ್ದು, ಕಾರ್ ನಿಂದ ಇಳಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರ ಪುತ್ರ ಮರಿಯಪ್ಪ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಮರಲಿಂಗಪ್ಪನ ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ಹಂತಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಕೆಲವು ತಿಂಗಳ ಹಿಂದೆ ಮರಲಿಂಗಪ್ಪನ ಸೊಸೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಗಂಡನ ಕುಟುಂಬದವರ ಕಿರುಕುಳವೇ ಕಾರಣವೆಂದು ಶಂಕಿಸಿ ಸೊಸೆಯ ಕುಟುಂಬದವರು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read