HomeCrimeಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಬೆಂಗಳೂರು: ತಲಘಟ್ಟಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ ಸೇರಿ ಐವರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ರಂಜಿತಾ, ಪ್ರಿಯಕರ ಗಣೇಶ, ಶರತ್, ಶಿವಾನಂದ, ದೀಪು ಬಂಧಿತ ಆರೋಪಿಗಳು. ಆರೋಪಿ ಗಣೇಶ ಮತ್ತು ರಂಜಿತಾ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅರುಣ್ ಕುಮಾರ್ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿ ಅರುಣ್ ಕುಮಾರ್ ನನ್ನು ಕೊಲೆ ಮಾಡಿಸಿದ್ದಾಳೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂ. 28ರಂದು ಅರುಣ್ ಕುಮಾರ್ ನನ್ನು ಕೊಲೆ ಮಾಡಿದ್ದು, ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular