ಕಲಬುರಗಿ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಸಂತೋಷ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ಶ್ರುತಿ(35), ಮಕ್ಕಳಾದ ಮನೀಶ್(9), ಮೂರು ತಿಂಗಳ ಮಗು ಅನೀಶ್ ನನ್ನು ಕೊಲೆ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಅವರು ನೇಣು ಹಾಕಿ ಆತ್ಮಹತ್ಯೆ ಮಾಡಿ ಕೊಂಡಿರಬಹುದು. ಜೊತೆಗೆ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.