HomeCrimeBREAKING: ಕತ್ತು ಹಿಸುಕಿ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಅಧಿಕಾರಿ ಆತ್ಮಹತ್ಯೆ

BREAKING: ಕತ್ತು ಹಿಸುಕಿ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಅಧಿಕಾರಿ ಆತ್ಮಹತ್ಯೆ

ಕಲಬುರಗಿ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಸಂತೋಷ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ಶ್ರುತಿ(35), ಮಕ್ಕಳಾದ ಮನೀಶ್(9), ಮೂರು ತಿಂಗಳ ಮಗು ಅನೀಶ್ ನನ್ನು ಕೊಲೆ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಅವರು ನೇಣು ಹಾಕಿ ಆತ್ಮಹತ್ಯೆ ಮಾಡಿ ಕೊಂಡಿರಬಹುದು. ಜೊತೆಗೆ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular