ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ.

28 ವರ್ಷದ ಇಂದು ಕೊಲೆಯಾದ ಮಹಿಳೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮೈಕಲ್ ಫ್ರಾನ್ಸಿಸ್(30) ಕೊಲೆ ಆರೋಪಿಯಾಗಿದ್ದಾನೆ. 10 ವರ್ಷಗಳ ದಂಪತಿ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಪತಿಯನ್ನು ತೊರೆದು ಕೋರಮಂಗಲದ ವೆಂಕಟಪುರದಲ್ಲಿರುವ ತವರು ಮನೆಯಲ್ಲಿ ಇಂದು ನೆಲೆಸಿದ್ದರು. ಹಿರಿಯರು ರಾಜೀ ಪಂಚಾಯಿತಿ ಮಾಡಿದ್ದರಿಂದ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ನಡತೆ ಶಂಕಿಸಿದ ಮೈಕಲ್ ಫ್ರಾನ್ಸಿಸ್ ಇಂದು ಮೇಲೆ ಹಲ್ಲೆ ಮಾಡುತ್ತಿದ್ದ. ಇದರಿಂದ ನೊಂದ ಆಕೆ ಮತ್ತೆ ತವರಿಗೆ ಹೋಗಿದ್ದಳು. ಪತ್ನಿ ಕೆಲಸ ಮಾಡುವ ಜಾಗಕ್ಕೆ ಹೋಗಿ ಫ್ಯಾನ್ಸಿಸ್ ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಇಂದು ಕೋರಮಂಗಲ ಠಾಣೆಗೆ ತೆರಳಿ ಪತಿ ವಿರುದ್ಧ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಗೆ ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ.

ಠಾಣೆ ಬಳಿ ಬಂದ ಆರೋಪಿ ಪೊಲೀಸ್ ಠಾಣೆಯಿಂದ ದೂರು ನೀಡಿ ಹೊರ ಬರುತ್ತಿದ್ದ ಪತ್ನಿಯನ್ನು ಕರೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಾಯಾಳು ಇದು ಅವರನ್ನು ಆಸ್ಪತ್ರೆಗೆ ಸಾಗಿಸವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಮತ್ತೆಗೆ ಕ್ರಮಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read