ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಳ್ಳಿ ನಿವಾಸಿಯಾಗಿರುವ ಮಾದೇಶ್ ಹಾಗೂ ಹರ್ಷಿತಾ ಮದುವೆ ಒಂದು ವರ್ಷದ ಹಿಂದೆ ನಡೆದಿದ್ದು, ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ನನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮಾದೇಶ್ ಕ್ಷುಲ್ಲಕ ಕಾರಣಗಳಿಗೆ ಜಗಳವಾಡುತ್ತಿದ್ದರಿಂದ ಹರ್ಷಿತಾ ತವರು ಮನೆ ಸೇರಿದ್ದಳು.

ಆಕೆಯನ್ನು ಕರೆದುಕೊಂಡು ಹೋಗಲು ಬಂದಿದ್ದ ಮಾದೇಶ್ ಬರಲು ಒಪ್ಪದಿದ್ದಾಗ ಜಗಳವಾಡಿ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತಡೆಯಲು ಬಂದ ಅತ್ತೆಯ ಮೇಲೆಯೂ ಹಲ್ಲೆ ನಡೆಸಿದ್ದಾನೆ. ಮೇಟಗಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read