HomeKarnatakaBREAKING : ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು : ಶಾಲೆಯ ಪ್ರಾಂಶುಪಾಲೆ...

BREAKING : ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು : ಶಾಲೆಯ ಪ್ರಾಂಶುಪಾಲೆ ಸಸ್ಪೆಂಡ್, ಅತಿಥಿ ಶಿಕ್ಷಕರು ವಜಾ

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾಗಿರುವ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಮೊರಾರ್ಜಿದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೆಷ್ವರಕ್ಕೆ ಬಂದಿದ್ದ ವೇಳೆ ನಿನ್ನೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳೆ. ಇನ್ನೂ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.

15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಈ ಮೂವರು ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿನಿಯರು ನೀರುಪಾಲಾಗಿರುವ ಪ್ರಕರಣ ಸಂಬಂಧ ಇದೀಗ ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಾಂಶುಪಾಲೆ ಹಾಗೂ ಅತಿಥಿ ಶಿಕ್ಷಕರು ಹಾಗೂ ಡಿಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular