BIG NEWS: ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಪ್ರಕರಣ: ಪ್ರಿನ್ಸಿಪಾಲ್ ಸೇರಿ 7 ಶಿಕ್ಷಕರು ಪೊಲೀಸ್ ವಶಕ್ಕೆ

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮುಖ್ಯ ಶಿಕ್ಷಕರು ಸೇರಿ 7 ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಬಂದಿದ್ದ ವೇಳೆ ಡಿ.10ರಂದು ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿತ್ತು. ಈ ವೇಳೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳು. ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಅವರ ಶವ ಡಿ.11ರಂದು ಬೆಳಿಗ್ಗೆ ಪತ್ತೆಯಾಗಿತ್ತು.

ಪ್ರಕರಣದ ಬೆನ್ನಲ್ಲೇ  ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಅಲ್ಲದೇ ಅತಿಥಿ ಶಿಕ್ಷಕರು ಹಾಗೂ ಡಿಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಇದೀಗ ವಿದ್ಯಾರ್ಥಿನಿಯರ ಸಾವಿಗೆಶಿಕ್ಷಕರ ನಿರ್ಲಕ್ಷವೇ ಕಾರಣ ಎಂದು ಪ್ರಕರಣ ದಾಖಲಾಗಿದ್ದು, ಮುಖ್ಯಶಿಕ್ಷಕಿ ಸೇರಿ 7 ಶಿಕ್ಷಕರನ್ನು ವಶಕ್ಕೆ ಪಡೆಯಲಾಗಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read