HomeKarnatakaಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿಗಳು ಸಮುದ್ರಪಾಲು; ಓರ್ವ ಸಾವು; ಮತ್ತೋರ್ವನ ರಕ್ಷಣೆ

ಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿಗಳು ಸಮುದ್ರಪಾಲು; ಓರ್ವ ಸಾವು; ಮತ್ತೋರ್ವನ ರಕ್ಷಣೆ

ಮುರುಡೇಶ್ವರ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ಗೌತಮ್ (17) ಮೃತ ವಿದ್ಯಾರ್ಥಿ. ಧನುಷ್ ಎಂಬ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ. ಇಬ್ಬರೂ ಬೆಂಗಳೂರಿನ ವಿದ್ಯಾಸೌಧ ಪಿಯು ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಈಜಲೆಂದು ಸಮುದ್ರಕ್ಕೆ ಇಳಿದಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾರೆ. ಗೌತಮ್ ಅದಾಗಲೇ ನೀರಿನಲ್ಲಿ ಮುಳುಗಿದ್ದ. ಧನುಷ್ ಜೀವ ಉಳಿಸಿಕೊಳ್ಳಲು ಅಲೆಗಳ ನಡುವೆ ಹೋರಾಡುತ್ತಿದ್ದ. ಇದನ್ನು ಕಂಡ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿಗಳು ಧನುಷ್ ನನ್ನು ರಕ್ಷಿಸಿ ಕರೆತಂದಿದ್ದಾರೆ.

ಬಳಿಕ ವಿಚಾರಿಸಿದಾಗ ಗೌತಮ್ ಎಂಬ ವಿದ್ಯಾರ್ಥಿ ಕೂಡ ಸಮುದ್ರದಲ್ಲಿ ಈಜಲು ಹೋಗಿದ್ದ ಎಂಬುದು ಗೊತ್ತಗಿದೆ. ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ ಗೌತಮ್ ಶವವಾಗಿ ಪತ್ತೆಯಾಗಿದ್ದಾನೆ. ಮುರುಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular