HomeUncategorizedಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ಲಕ್ಕಿ ಡ್ರಾ ಎಂದು ವಂಚನೆ: ಆರೋಪಿ ಅರೆಸ್ಟ್

ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ಲಕ್ಕಿ ಡ್ರಾ ಎಂದು ವಂಚನೆ: ಆರೋಪಿ ಅರೆಸ್ಟ್

ಕಾರವಾರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರುಡೇಶ್ವರ ದೇವಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಲಕ್ಕಿ ಡ್ರಾ ನಡೆಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ.

ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಲಖನಗಾಂವ್ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂದು ಗುರುತಿಸಲಾಗಿದೆ.

ಈತ ದೇವಸ್ಥಾನದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ. ಆರೋಪಿಯು “ಶ್ರೀ ಮುರ್ಡೇಶ್ವರ ಅದೃಷ್ಟ ಡ್ರಾ” ಹೆಸರಿನಲ್ಲಿ ನಕಲಿ ಭಿತ್ತಿಪತ್ರಗಳನ್ನು ಸೃಷ್ಟಿಸಿದ್ದ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂಗಳಲ್ಲಿ ನಕಲಿ ಖಾತೆಗಳನ್ನು ತೆರೆದು, ಆ ಮೂಲಕ ಲಾಟರಿ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ಸಾರ್ವಜನಿಕರಿಂದ ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುರುಡೇಶ್ವರ ದೇವಸ್ಥಾನದ ಹೆಸರಿನಲ್ಲಿ ಸಾರ್ವಜನಿಕರನ್ನು ದೋಚುತ್ತಿರುವ ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇವಸ್ಥಾನದ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿತ್ತು. ದೇವಸ್ಥಾನದ ವ್ಯವಸ್ಥಾಪಕರಾದ ಮಂಜುನಾಥ ಶೆಟ್ಟಿ ಅವರು ಈ ವಂಚನೆಯ ಜಾಲದ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ತಾಂತ್ರಿಕ ಮಾಹಿತಿಗಳನ್ನು ಕಲೆಹಾಕಿ, ಬೀದರ್ ಮೂಲದ ಆರೋಪಿ ನರಸಿಂಗ್‌ನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular