ಭಟ್ಕಳ: ನಿರ್ಬಂಧದ ನಡುವೆಯೂ ಮೀನುಗರಿಕೆಗೆ ತೆರಳಿದ್ದ ಬೋಟ್ ಸಮುದ್ರದ ಅಲೆಗಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಮುರುದೇಷ್ವರದಲ್ಲಿ ನಡೆದಿದೆ.
ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುಬ್ಧಗೊಂಡಿದೆ. ಅಲ್ಲದೇ ಕೆಲ ದಿನಗಳವರೆಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಆದಾಗ್ಯೂ ಮೀನುಗಾರರು ಮೀನುಗಾರಿಕೆಗೆ ತೆರಳಿ ದುರಂತಕ್ಕೀಡಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ಈ ಘಟನೆ ನಡೆದಿದೆ.
ಗಿಲ್ನಿಟ್ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾರೆ. ಮಹದೇವ್ ಹಾಗೂ ಆನಂದ್ ಮೃತ ದುರ್ದೈವಿಗಳು. ವೆಂಕಟೇಶ್ ನಾಪತ್ತೆಯಾಗಿರುವ ವ್ಯಕ್ತಿ. ಜನಾರ್ಧನ ಹರಿಕಾಂತ್ ಎಂಬುವವರಿಗೆ ಸೇರಿದ ದೋಣಿ ಇದಾಗಿದ್ದು, ನಿಷೇಧದ ನಡುವೆಯೂ ಮೀನುಗಾರಿಕೆಗೆ ತೆರಳಿ ದುರಂತ ಸಂಭವಿಸಿದೆ.