HomeKarnatakaBREAKING : ಮುರುಘಾ ಶ್ರೀ ಪೋಕ್ಸೋ ಪ್ರಕರಣ : ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು...

BREAKING : ಮುರುಘಾ ಶ್ರೀ ಪೋಕ್ಸೋ ಪ್ರಕರಣ : ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್

ಚಿತ್ರದುರ್ಗ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಜಾಮೀನು ಮಂಜೂರಾಗಿದೆ.

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಪರಮಶಿವಯ್ಯಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular