HomeKarnatakaಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ, 50 ಶಾಸಕರು ರಾಜೀನಾಮೆಗೆ ರೆಡಿ: ನಿರಾಣಿ ಹೊಸ ಬಾಂಬ್

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ, 50 ಶಾಸಕರು ರಾಜೀನಾಮೆಗೆ ರೆಡಿ: ನಿರಾಣಿ ಹೊಸ ಬಾಂಬ್

ಬಾಗಲಕೋಟೆ: ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿರುವುದೇ ಗ್ಯಾರಂಟಿ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ 50 ಶಾಸಕರು ರಾಜೀನಾಮೆ ಕೊಡಲು ಸಿದ್ದರಿದ್ದಾರೆ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಐವತ್ತು 50 ಶಾಸಕರು ಅವರಾಗಿಯೇ ರಾಜೀನಾಮೆ ನೀಡಿ ಬರಲು ಸಿದ್ಧರಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಒಂದೂ ಹೊಸ ಯೋಜನೆ ಜಾರಿಗೊಳಿಸಿಲ್ಲ. ಬಿಟ್ಟಿ ಭಾಗ್ಯಗಳ ಹಿಂದೆ ಬಿದ್ದಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳು ಅರ್ಧಕ್ಕೆ ನಿಂತಿವೆ. ಅನುದಾನ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ನಿರಾಣಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular