HomeKarnatakaBIG NEWS: ಯತ್ನಾಳ್ ಮಾತು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ; ಮಾಜಿ ಸಚಿವ ನಿರಾಣಿ ತಿರುಗೇಟು

BIG NEWS: ಯತ್ನಾಳ್ ಮಾತು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ; ಮಾಜಿ ಸಚಿವ ನಿರಾಣಿ ತಿರುಗೇಟು

ಬಾಗಲಕೋಟೆ: ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಶಾಸಕ ಯತ್ನಾಳ್ ಟೀಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ಮಾತನ್ನು ಯಾರೂ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ ಎಂದು ಟಾಂಗ್ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ, ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲ್ಲ. ಏನು ಮಾತನಾಡುತ್ತಿದ್ದೀನಿ ಎಂದು ಅವರಿಗೇ ಅರ್ಥ ಆಗುತ್ತೋ ಇಲ್ವೋ ಗೊತ್ತಿಲ್ಲ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕಾಂಗ್ರೆಸ್ ಸರ್ಕಾರ 6 ತಿಂಗಳಲ್ಲಿ ಪತನವಾಗುತ್ತದೆ. ಸರ್ಕಾರದ ವಿರುದ್ಧ ರಾಜ್ಯದ ಜನ ರೊಚ್ಚಿಗೆದ್ದಿದ್ದಾರೆ. ಸರ್ಕಾರ ಹಿಂದೂಗಳಿಗೆ ತಾರತಮ್ಯ ಮಾಡಿದೆ. ಸರ್ಕಾರವನ್ನು ಕಿತ್ತೆಗೊಯಲು ಜನ ಕಾಯುತ್ತಿದ್ದಾರೆ. ಈಗಾಗಲೇ ಸರ್ಕಾರ ಕೋಮಾ ಸ್ಥಿತಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular