HomeKarnatakaBREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

BREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ.

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ದಾವಣಗೆರೆಯಿಂದ ಆಗಮಿಸಿದ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಬಂದು ಶರಣಾದರು. ಈ ವೇಳೆ ಶ್ರೀಗಳನ್ನು ನ್ಯಾಯಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುರುಘಾ ಶ್ರೀಗಳನ್ನು ಪೊಲೀಸ್ ವ್ಯಾನ್ ನಲ್ಲಿ ಜೈಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ಸಂತ್ರಸ್ತೆಯರನ್ನು ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular