ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಚಿತ್ರದುರ್ಗ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.
ಚಿತ್ರದುರ್ಗದ ಮುರುಘಾ ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದ ಬಡ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಮುರುಘಾಶ್ರೀಗಳು ನಿರಂತರ ಲೈಂಗಿಕ ದೌರ್ಜ್ಯವೆಸಗುತ್ತಿರುವ ಬಗ್ಗೆ ಆರೋಪ ಕೇಳಿಬಂದಿತ್ತು. 2022 ಆಗಸ್ಟ್ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು, ಬಳಿಕ ಎರಡನೇ ಪೋಕ್ಸೋ ಕೇಸ್ ಕೂಡ ದಾಖಲಾಗಿತ್ತು. ಪ್ರಕರಣದಲ್ಲಿ ಮುರುಘಾ ಶ್ರೀ ಜೈಲು ಸೇರಿದ್ದರು
ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ಮೊದಲ ಕೇಸ್ ವಿಚಾರಣೆ ಮುಕ್ತಾಯವಾಗಿದ್ದು, ಇಂದು ಚಿತ್ರದುರ್ಗದ ಎರಡನೇ ಸೆಷನ್ಸ್ ಹಾಗೂ ಜಿಲ್ಲಾ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಇಂದು ಮಧ್ಯಾಹ್ನ 2:45ಕ್ಕೆ ತೀರ್ಪು ಕಾಯ್ದುರಿಸಿದೆ.
