HomeLatest NewsBREAKING: ಪೋಕ್ಸೋ ಕೇಸ್: ಮುರುಘಾ ಶ್ರೀಗೆ ಬಿಗ್ ರಿಲೀಫ್

BREAKING: ಪೋಕ್ಸೋ ಕೇಸ್: ಮುರುಘಾ ಶ್ರೀಗೆ ಬಿಗ್ ರಿಲೀಫ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಚಿತ್ರದುರ್ಗ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಕೋರ್ಟ್ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಮುರುಘಾ ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದ ಬಡ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಮುರುಘಾಶ್ರೀಗಳು ನಿರಂತರ ಲೈಂಗಿಕ ದೌರ್ಜ್ಯವೆಸಗುತ್ತಿರುವ ಬಗ್ಗೆ ಆರೋಪ ಕೇಳಿಬಂದಿತ್ತು. 2022 ಆಗಸ್ಟ್ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು, ಬಳಿಕ ಎರಡನೇ ಪೋಕ್ಸೋ ಕೇಸ್ ಕೂಡ ದಾಖಲಾಗಿತ್ತು. ಪ್ರಕರಣದಲ್ಲಿ ಮುರುಘಾ ಶ್ರೀ ಜೈಲು ಸೇರಿದ್ದರು.

ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ಮೊದಲ ಕೇಸ್ ವಿಚಾರಣೆ ಮುಕ್ತಾಯವಾಗಿದ್ದು, ಇಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಹಾಗೂ ಜಿಲ್ಲಾ ಕೋರ್ಟ್ ತೀರ್ಪು ಪ್ರಕಟಿಸಿದೆ. ಮೊದಲ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದಲ್ಲಿ ಮುರುಘಾ ಶ್ರೀ ಎ1 ಆರೋಪಿಯಾಗಿದ್ದು, ವಾರ್ಡನ್ ರಶ್ಮಿ ಎ 2, ಪರಮಶಿವಯ್ಯ ಎ4 ಆರೋಪಿಯಾಗಿದ್ದಾರೆ. ಇಂದು ಕೋರ್ಟ್ ಗೆ ಮೂವರು ಆರೋಪಿಗಳು ಖುದ್ದು ಹಾಜರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular