HomeKarnatakaBREAKING NEWS: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಅರೆಸ್ಟ್ ವಾರೆಂಟ್ ಜಾರಿ

BREAKING NEWS: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಅರೆಸ್ಟ್ ವಾರೆಂಟ್ ಜಾರಿ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಬಂಧನದ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲನೇ ಪೋಕ್ಸೋ ಕೇಸ್ ನಲ್ಲಿ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular