HomeKarnatakaBREAKING: ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಇಲ್ಲ ಬಿಡುಗಡೆ ಭಾಗ್ಯ

BREAKING: ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಇಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ಶ್ರೀಗಳಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 2022ರಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಇಂದು ಒಂದು ಪ್ರಕರಣದಲ್ಲಿ 7 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುರುಘಾ ಶ್ರೀ ಚಿತ್ರದುರ್ಗಕ್ಕೆ ಪ್ರವೇಶ ಮಡುವಂತಿಲ್ಲ, ಪಾಸ್ ಪೋರ್ಟ್ ಕೋರ್ಟ್ ವಶಕ್ಕೆ ನಿಡಬೇಕು, ಇಬ್ಬರ ಶ್ಯೂರಿಟಿ ಹಾಗೂ 2 ಲಕ್ಷ ಬಾಂಡ್, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು. ಇಂತಹ ಪ್ರಕರಣ ಮರುಕಳಿಸಬಾರದು ಸೇರಿದಂತೆ ಒಟ್ಟು 7 ಷರತ್ತುಗಳನ್ನು ವಿಧಿಸಿ ಬೇಲ್ ನೀಡಲಾಗಿದೆ. ಆದರೆ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣವಿರುವುದರಿಂದ ಆ ಪ್ರಕರಣದ ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೊದಲ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular