HomeKarnatakaBIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

ಪೊಕ್ಸೋ ಪ್ರಕರಣದ ಎ3 ಆರೋಪಿಯಾಗಿರುವ ಮುರುಘಾ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 17ರಂದು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಿಂದ ಆರೋಪಿ ಬಿಡುಗಡೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಜೈಲು ಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಪರಮಶಿವಯ್ಯ ಮೂರನೇ ಆರೋಪಿಯಾಗಿದ್ದು, 2022ರ ಅಕ್ಟೋಬರ್ 28ರಂದು ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular