HomeKarnatakaBIG NEWS: ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ಪ್ರಕರಣದ ಬಗ್ಗೆ ಹೇಳಿದ್ದೇನು?

BIG NEWS: ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ಪ್ರಕರಣದ ಬಗ್ಗೆ ಹೇಳಿದ್ದೇನು?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗ ಪ್ರವೇಶಕ್ಕೆ ಮುರುಘಾ ಶ್ರೀಗಳಿಗೆ ಕೋರ್ಟ್ ಅವಕಾಶ ನೀಡದ ಹಿನ್ನೆಲೆಯಲ್ಲಿ ದಾವಣಗೆರೆಗೆ ತೆರಳಿದ್ದು, ದಾವಣಗೆರೆಯ ಜಯದೇವ ಗದ್ದುಗೆ ದರ್ಶನ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾವುಕರಾದರು. ಪ್ರಕರಣದ ಬಗ್ಗೆ, ಆರೊಪದ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನ ವಿರುದ್ಧದ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ಈಗ ನೀಡಲ್ಲ, ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲದಕ್ಕೂ ವಕೀಲರು ಪ್ರತಿಕ್ರಿಯೆ ಕೊಡುತ್ತಾರೆ. ಸದ್ಯಕ್ಕೆ ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಮುರುಘಾ ಶ್ರೀ 441 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular