HomeKarnatakaBREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರು ಅಪರಾಧಿಗಳಿಗೆ 5 ವರ್ಷ ಕಠಿಣ ಶಿಕ್ಷೆ ತಲಾ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾದ 98 ಅಪರಾಧಿಗಳಿಗೆ ತಲಾ 5 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಶಿಕ್ಷೆಗೊಳಗಾದವರು ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದ ನಿವಾಸಿಗಳಾಗಿದ್ದಾರೆ. 2014ರ ಆಗಸ್ಟ್ 28 ರಂದು ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ದಲಿತರ ಮನೆ ಸುಟ್ಟು ದಾಳಿ ಮಾಡಿದ ಪ್ರಕರಣದಲ್ಲಿ 101 ಮಂದಿ ಅಪರಾಧಿಗಳು ಎಂದು ಅ. 21ರಂದು ನ್ಯಾಯಾಧೀಶರು ಘೋಷಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ಸಂಬಂಧ ಶಿಕ್ಷೆ ಪ್ರಕಟಿಸಲಾಗಿದೆ. ಸಿನಿಮಾ ನೋಡಲು ಹೋದಾಗ ದಲಿತ ಮಂಜುನಾಥನ ಮೇಲೆ ಹಲ್ಲೆ ನಡೆಸಲಾಗಿತ್ತು. ತಮ್ಮೂರಿನ ದಲಿತರೇ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮದ ಜನರಿಗೆ ಮಂಜುನಾಥ ಹೇಳಿದ್ದ. ನಂತರ ಎರಡೂ ಕಡೆಯವರ ನಡುವೆ ಗಲಾಟೆಯಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular