HomeLatest Newsವಿಧಾನ ಪರಿಷತ್, ನಿಗಮ, ಮಂಡಳಿ ಸೇರಿ ಸರ್ಕಾರದ ನಾಮನಿರ್ದೇಶನಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲು ಮುಸ್ಲಿಂ ನಾಯಕರಿಂದ...

ವಿಧಾನ ಪರಿಷತ್, ನಿಗಮ, ಮಂಡಳಿ ಸೇರಿ ಸರ್ಕಾರದ ನಾಮನಿರ್ದೇಶನಗಳಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲು ಮುಸ್ಲಿಂ ನಾಯಕರಿಂದ ಸಿಎಂಗೆ ಮನವಿ

ಬೆಂಗಳೂರು: ನಿಗಮ ಮಂಡಳಿ ಸೇರಿದಂತೆ ಸರ್ಕಾರದ ನಾಮನಿರ್ದೇಶನಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮುಸ್ಲಿಂ ನಾಯಕರ ನಿಯೋಗ, ನಿಗಮ – ಮಂಡಳಿ ಹಾಗೂ ಪರಿಷತ್ ನಾಮಕರಣ ಸೇರಿದಂತೆ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಂತೆ ಮನವಿ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾದ ರಹೀಮ್ ಖಾನ್, ಮಾಜಿ ಸಚಿವರಾದ ತನ್ವಿರ್ ಸೇಠ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಶಾಸಕ ರಿಜ್ವಾನ್ ಅರ್ಷದ್, ಮುಖಂಡರಾದ ಮನ್ಸೂರ್ ಅಲಿ ಖಾನ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular