HomeIndiaBIG NEWS: ಮುಸ್ಲಿಮರು ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಿಕೊಳ್ಳಬಹುದು: ಹೈಕೋರ್ಟ್ ಆದೇಶ

BIG NEWS: ಮುಸ್ಲಿಮರು ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಿಕೊಳ್ಳಬಹುದು: ಹೈಕೋರ್ಟ್ ಆದೇಶ

ಮುಂಬೈ: ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಮುಸ್ಲಿಂ ವೈಯಕ್ತಿಕ ಕಾನೂನುಗಳು ಮದುವೆಗೆ ಅವಕಾಶ ಮಾಡಿಕೊಡುತ್ತವೆ ಎಂದು ಮೂರನೇ ವಿವಾಹ ನೋಂದಣಿ ಮಾಡಿಸಲು ಬಯಸಿದ್ದ ಪುರುಷನೊಬ್ಬನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಸೋಮಶೇಖರ್ ಸುಂದರೇಶನ್ ಅವರಿದ್ದ ವಿಭಾಗೀಯ ಪೀಠ ಅಕ್ಟೋಬರ್ 15ರಂದು ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಲು ವೈಯಕ್ತಿಕ ಕಾನೂನುಗಳು ಅವಕಾಶ ಮಾಡಿಕೊಡುತ್ತವೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಲ್ಜೀರಿಯಾದ ಮಹಿಳೆಯೊಬ್ಬರನ್ನು ಮದುವೆಯಾಗಿದ್ದ ವ್ಯಕ್ತಿ ಅದರ ನೋಂದಣಿ ಕೋರಿ ಕಳೆದ ವರ್ಷ ಫೆಬ್ರವರಿಯಲ್ಲಿ ಸಲ್ಲಿಸಿದ ಅರ್ಜಿ ಕುರಿತಾಗಿ ಠಾಣೆ ಮಹಾನಗರ ಪಾಲಿಕೆ ಉಪ ವಿವಾಹ ನೋಂದಣಿ ಅಧಿಕಾರಿಗೆ ತೀರ್ಮಾನ ಕೈಗೊಳ್ಳುವಂತೆ ಪೀಠ ಸೂಚನೆ ನೀಡಿದೆ.

ಇದು ಪುರುಷನ ಮೂರನೇ ಮದುವೆಯಾಗಿರುವ ಕಾರಣ ವಿವಾಹ ನೋಂದಣಿ ಅರ್ಜಿ ತಿರಸ್ಕರಿಸಲಾಗಿದೆ. ವಿವಾಹ ಪ್ರಮಾಣ ಪತ್ರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ದಂಪತಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಮಹಾರಾಷ್ಟ್ರ ವೈವಾಹಿಕ ಸಂಸ್ಥೆಗಳ ನಿಯಂತ್ರಣ ಮತ್ತು ವಿವಾಹ ನೋಂದಣಿ ಕಾಯ್ದೆಯ ಪ್ರಕಾರ ಮದುವೆ ಒಂದು ಬಾರಿಗೆ ಮಾತ್ರ ಆಗುವಂತದ್ದು, ಹಲವು ಬಾರಿ ಆಗುವಂಥದ್ದಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ದಂಪತಿಯ ವಿವಾಹ ನೋಂದಣಿಗೆ ನಿರಾಕರಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಮುಸ್ಲಿಮರ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಒಂದೇ ಬಾರಿಗೆ ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಲು ಪುರುಷರಿಗೆ ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular