HomeKarnatakaವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ: ಪ್ರೀತಿಸುವಂತೆ ಪೀಡಿಸಿದ್ದಾಗಿ ಆರೋಪಿಸಿ ತಾಯಿ ದೂರು

ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ: ಪ್ರೀತಿಸುವಂತೆ ಪೀಡಿಸಿದ್ದಾಗಿ ಆರೋಪಿಸಿ ತಾಯಿ ದೂರು

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

ಸುಬ್ರಹ್ಮಣ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿ, ಆಕೆಗೆ ಚಾಕೊಲೇಟ್ ನೀಡಿದ ಯುವಕನನ್ನು ಬಲವಂತವಾಗಿ ಜೀಪಿನಲ್ಲಿ ಕರೆದುಕೊಂಡು ಹೋದ ಗುಂಪು ಕುಮಾರಧಾರ ಜಂಕ್ಷನ್ ಸಮೀಪ ಹಳೆಯ ಕಟ್ಟಡದಲ್ಲಿ ಹಲ್ಲೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಳ್ಯ ತಾಲೂಕು ಸಂಪಾಜೆ ಕಲ್ಲುಗುಂಡಿಯ ಹಫೀದ್(20) ಹಲ್ಲೆಗೊಳಗಾದ ಯುವಕ. ಕಳೆದ ವರ್ಷ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ವಿದ್ಯಾರ್ಥಿನಿಯನ್ನು ಸುಬ್ರಹ್ಮಣ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಎರಡು ಮೂರು ಸಲ ಭೇಟಿಯಾಗಿ ಮಾತನಾಡಿದ್ದ. ಗುರುವಾರ ಸಂಜೆ ಕಾಲೇಜು ಮುಗಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ವಿದ್ಯಾರ್ಥಿನಿಯನ್ನು ಮಾತನಾಡಿಸಿ ಚಾಕೊಲೇಟ್ ಕೊಟ್ಟಿದ್ದಾನೆ. ಈ ವೇಳೆ ಆತನಿಗೆ ಪರಿಚಯವಿಲ್ಲದ ಮೂರ್ನಾಲ್ಕು ಮಂದಿ ಬಲವಂತವಾಗಿ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಐದಾರು ಜನ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಕೋಲಿನಿಂದ ಹಲ್ಲೆ ಮಾಡಿದ್ದು ಒಬ್ಬ ಚಾಕುವಿನಿಂದ ಇರಿಯಲು ಮುಂದಾದಾಗ ಕೆಲವರು ತಡೆದಿದ್ದಾರೆ ಎಂದು ಹಫೀದ್ ದೂರು ನೀಡಿದ್ದಾನೆ.

ಹಫೀದ್ ವಿರುದ್ಧ ವಿದ್ಯಾರ್ಥಿನಿಯ ತಾಯಿ ಕೂಡ ದೂರು ನೀಡಿದ್ದಾರೆ. ಮಗಳು ಕಾಲೇಜಿಗೆ ಹೋಗಿ ಬರುವಾಗ ಪ್ರೀತಿಸುವಂತೆ ಹಫೀದ್ ಪೀಡಿಸುತ್ತಿದ್ದ. ಆಕೆಯ ಮೊಬೈಲ್ ನಂಬರ್ ಕೇಳಿದ್ದ. ಆಕೆ ನಿರಾಕರಿಸಿದಾಗ ಕೈಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ. ಆತನಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ ಮಗಳು ವಿಚಲಿತಳಾಗಿದ್ದಳು. ಆಕೆಯನ್ನು ವಿಚಾರಿಸಿದಾಗ ತಡವಾಗಿ ಈ ಬಗ್ಗೆ ಮಾಹಿತಿ ನೀಡಿರುವುದಾಗಿ ವಿದ್ಯಾರ್ಥಿನಿಯ ತಾಯಿ ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular