ಹುಬ್ಬಳ್ಳಿ: ಮುಸ್ಲಿಂ ಯುವಕನೊಬ್ಬ ಹಿಂದೂ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಘಟನೆ ನಡೆದಿದ್ದು, ಸ್ಥಳೀಯರು ಬಾಲಕಿಯರನ್ನು ರಕ್ಷಣೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತ ಬಾಲಕಿಯನ್ನು ತಾನು ಹಿಂದೂ ಯುವಕನೆಂದು ಪರಿಚಯಿಸಿಕೊಂಡಿದ್ದ ಕಾಮುಕ, ಆಕೆಯೊಂದಿಗೆ ಸಲುಗೆ ಬೆಳೆಸಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯುವಕ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಯುವಕನನ್ನು ಹಿಡಿದು, ಯಾರು? ಯಾಕೆ ಬಾಲಕಿಯನ್ನು ಕರೆದುಕೊಂಡು ಬಂದಿದ್ದೀಯಾ? ಎಂದು ಪ್ರಶ್ನಿಸಿದ್ದಾರೆ. ಆತ ತನ್ನ ಹೆಸರು ರಮೇಶ್ ಎಂದು ಸುಳ್ಳು ಹೇಳಿದ್ದಾನೆ. ಹೊಲಕ್ಕೆ ಬಾಲಕಿಯನ್ನು ಕರೆತಂದಿದ್ದೆ ಎಂದಿದ್ದಾನೆ. ಅನುಮಾನಗೊಂಡ ಸ್ಥಳೀಯರು ಯುವಕನ ಮೊಬೈಲ್ ಕಿತ್ತುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯುವಕ ಮುಸ್ಲಿಂ ಹಾಗೂ ಆತನ ಹೆಸರು ಸೈಯದ್ ರಹನಾ ಎಂಬುದು ಗೊತ್ತಾಗಿದೆ.
ಯುವಕನ ಮೊಬೈಲ್ ನಲ್ಲಿ ಕೆಲ ಯುವತಿಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಇದನ್ನು ಕಂಡ ಸಾರ್ವಜನಿಕರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಯುವಕ ತಾನು ಹೊಲಕ್ಕೆ ಬಾಲಕಿಯನ್ನು ಕರೆದೊಯ್ದಿದ್ದೆ, ತನ್ನಿಂದ ತಾಪ್ಪಾಗಿದೆ. ಇನ್ಮುಂದೆ ಹೀಗೆ ಮಾಡುವುದಿಲ್ಲ ಎಂದಿದ್ದಾನೆ. ಸೈಯದ್ ನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಗೋಕುಲ್ ರೋಡ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.