HomeKarnatakaಪ್ರತಿ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದೇವೆ, ಮುಸ್ಲಿಮರಿಗೆ ಟಿಕೆಟ್ ಕೊಡಿ: ಅಂಜುಮನ್ ಕಮಿಟಿ ಮನವಿ

ಪ್ರತಿ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದೇವೆ, ಮುಸ್ಲಿಮರಿಗೆ ಟಿಕೆಟ್ ಕೊಡಿ: ಅಂಜುಮನ್ ಕಮಿಟಿ ಮನವಿ

ಧಾರವಾಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಡಲಾಗಿದೆ. ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡಬೇಕು ಎಂದು ಅಂಜುಮನ್ ಕಮಿಟಿ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಮನವಿ ಸಲ್ಲಿಸಲಾಗಿದ್ದು, ಪ್ರತಿ ಸಲವೂ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದೇವೆ. ಈ ಬಾರಿ ಧಾರವಾಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಸುರ್ಜೆವಾಲಾ ಅವರಿಗೆ ಅಂಜುಮನ್ ಕಮಿಟಿ ಮುಖಂಡರು ಮನವಿ ಸಲ್ಲಿಸಿದ್ದಾರೆ. ಮುಸ್ಲಿಂ ಮುಖಂಡರ ಮನವಿ ಪರಿಗಣಿಸಿದ ಸುರ್ಜೇವಾಲಾ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular