‘ಮುಸ್ಲಿಮರ ಮತ ಬೇಡ’ ಹೇಳಿಕೆ : K.S ಈಶ್ವರಪ್ಪ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ‘ನನಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಸಂಬಂಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ ಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ಶುಕ್ರವಾರ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ .

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಡಿ.15 ಕ್ಕೆ ಮುಂದೂಡಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ‘ ನನಗೆ ಮುಸ್ಲಿಮರ ಮತ ಬೇಡ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆ ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು, ನಂತರ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅರ್ಜಿ ಸಲ್ಲಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read