HomeKarnatakaಬಜೆಟ್ ನಲ್ಲಿ ಘೋಷಿಸಿದಂತೆ ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ: ಸಂಪುಟ ಸಭೆ ಅಸ್ತು

ಬಜೆಟ್ ನಲ್ಲಿ ಘೋಷಿಸಿದಂತೆ ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ: ಸಂಪುಟ ಸಭೆ ಅಸ್ತು

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಗಳಲ್ಲೂ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ರಾಜ್ಯದಲ್ಲಿ ಎರಡು ಕೋಟಿ ರೂಪಾಯಿವರೆಗಿನ ಗುತ್ತಿಗೆ ಕಾಮಗಾರಿಗಳು ಹಾಗೂ ಒಂದು ಕೋಟಿ ರೂಪಾಯಿವರೆಗಿನ ಖರೀದಿ, ಸೇವೆಗಳಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು 2ಎ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕೆಟಿಟಿಪಿ ಕಾಯ್ದೆ 1999ರ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಸಭೆಯ ಅನುಮೋದನೆ ನೀಡಿದೆ.

ಈ ಮೊದಲೇ ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, 2ಎ ಮೀಸಲಾತಿ ಕಲ್ಪಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7 ರಂದು ಮಂಡಿಸಿದ್ದ ಬಜೆಟ್ ನಲ್ಲಿ ಒಂದು ಕೋಟಿ ರೂಪಾಯಿ ಮಿತಿಯನ್ನು ಎರಡು ಕೋಟಿ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಎಲ್ಲಾ ಪ್ರವರ್ಗಗಳಿಗೆ ಒಂದು ಕೋಟಿ ರೂಪಾಯಿವರೆಗಿನ ಖರೀದಿ ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಈ ಮೀಸಲಾತಿ ಪಟ್ಟಿಗೆ ಹೊಸದಾಗಿ ಮುಸ್ಲಿಮರನ್ನು ಸೇರಿಸಿ ಗುತ್ತಿಗೆ ಕಾಮಗಾರಿ, ಖರೀದಿ ಸೇವೆಗಳಲ್ಲಿ ಶೇ. 4ರಷ್ಟು ಮೀಸಲಾತಿ ಒದಗಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular