ತಮ್ಮ ತಂದೆ ಸಿದ್ದರಾಮಯ್ಯನವರೇ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದು, ಕರ್ನಾಟಕದ ಹಿತದೃಷ್ಟಿಯಿಂದ ತಂದೆ ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ.
“ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆಯಲಿದ್ದು, ವರುಣಾ ಕ್ಷೇತ್ರದಲ್ಲಿ ತಮ್ಮ ತಂದೆ ಭಾರಿ ಅಂತರದಿಂದ ಗೆಲ್ಲಲಿದ್ದಾರೆ ಎಂದರು.
“ಮಗನಾಗಿ, ನಾನು ಅವರನ್ನು ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇನೆ. ಆದರೆ ರಾಜ್ಯದ ನಿವಾಸಿಯಾಗಿ, ಅವರ ಕಳೆದ ಆಡಳಿತವು ಉತ್ತಮ ಆಡಳಿತವನ್ನು ಹೊಂದಿತ್ತು. ಈ ಬಾರಿಯೂ ಅವರು ಮುಖ್ಯಮಂತ್ರಿಯಾದರೆ ಬಿಜೆಪಿ ಆಡಳಿತದಲ್ಲಿನ ಯಾವುದೇ ಭ್ರಷ್ಟಾಚಾರ ಮತ್ತು ದುರಾಡಳಿತವನ್ನ ಅವರು ಸರಿಪಡಿಸುತ್ತಾರೆ. ರಾಜ್ಯದ ಹಿತದೃಷ್ಟಿಯಿಂದ ಅವರು ಸಿಎಂ ಆಗಬೇಕು ಎಂದು ಯತೀಂದ್ರ ಹೇಳಿದರು.