HomeKarnatakaಅಜ್ಜಿಯ ಮನೆಗೆ ಬಂದಿದ್ದಾಗಲೇ ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಅಜ್ಜಿಯ ಮನೆಗೆ ಬಂದಿದ್ದಾಗಲೇ ದುರಂತ; ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರು: 8 ವರ್ಷದ ಬಾಲಕನೊಬ್ಬ ಟ್ರ್ಯಾಕ್ಟರ್ ಅದಿ ಸಿಲುಕಿ ಮ್ರ‍ಿತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

ಭವಿಷ್ (8) ಮೃತ ಬಾಲಕ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತನ್ನ ತಾಯಿಯ ಜೊತೆ ಅಜ್ಜಿಯ ಮನೆಗೆಂದು ಬಾಲಕ ಬಂದಿದ್ದ. ಈ ವೇಳೆ ಬಾಲಕ ತನ್ನ ಮಾವನ ಜೊತೆ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ಹೋಗಿದ್ದಾನೆ.

ಜಮೀನಿನಲ್ಲಿ ಉಳಿಮೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಟ್ರ್ಯಾಕ್ಟರ್ ರೋಟಾವೇಟರ್ ಗೆ ಸಿಲುಕಿದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟ್ರ್ಯಾಕ್ಟರ್ ಅಡಿ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular