HomeKarnatakaಮೈಸೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!

ಮೈಸೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ..!

ಮೈಸೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ ನರಸೀಪುರದಲ್ಲಿ ನಡೆದಿದೆ.

ಮೃತ ಯುವಕನನ್ನು ಬೇರಂಬಾಡಿ ಗ್ರಾಮದ ಕಿರಣ್ (28) ಎಂದು ಗುರುತಿಸಲಾಗಿದೆ. ತಿ ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದರು. ನನ್ನನ್ನು ಬೇಕಂತಲೆ ಕೆಲಸದಿಂದ ತೆಗೆದು ಹಾಕಲಾಗಿದೆ , ಲೋಕೇಶ್ ಹಾಗೂ ಅನಿಲ್ ನನಗೆ ಎಲ್ಲೂ ಕೂಡ ಕೆಲಸ ಸಿಗದ ಹಾಗೆ ಮಾಡಿದ್ದಾರೆ ಎಂದು ಕಿರಣ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ತಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular