ಮೈಸೂರು : ಮೈಸೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆಯಾಗಿದೆ.
ಮೈಸೂರು ನಗರದ ವಸ್ತು ಪ್ರದರ್ಶನ ಮುಂಭಾಗ ಈ ಕೊಲೆ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
4-5 ಮಂದಿ ಯುವಕರ ಗುಂಪು ಬಂದು ಯುವಕನ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಹೋಗಿದ್ದಾರೆ.