HomeLatest NewsBREAKING : ಮೈಸೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ: 10 ಜನರಿಗೆ ಗಂಭೀರ...

BREAKING : ಮೈಸೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ: 10 ಜನರಿಗೆ ಗಂಭೀರ ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂಋ ಬಳಿ ಕಬಿನಿ ಕಾಲುವೆ ಬಳಿ ನಡೆದಿದೆ.

ಶುಂಠಿ ಕೆಲಸಕ್ಕಾಗಿ ಕಾರ್ಮಿಕರು ಸರಗೂರಿಗೆ ಟಾಟಾ ಏಸ್ ನಲ್ಲಿ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಚಾಲಕ ಸೇರಿ 10 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ

ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ. ಸ್ಥಳಕ್ಕೆ ಸರಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular