HomeKarnatakaBIG NEWS: ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಮನೆಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ; ಮೈಸೂರು ವಿಮಾನ ನಿಲ್ದಾಣಕ್ಕೆ...

BIG NEWS: ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಮನೆಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ; ಮೈಸೂರು ವಿಮಾನ ನಿಲ್ದಾಣಕ್ಕೆ ಬೇಡ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ವಿಚಾರ ಆಡಳಿತ ಹಾಗೂ ವಿಪಕ್ಷ ನಾಯಕ ಜಟಾಪಟಿಗೆ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಸ್ತಾಪಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಶಾಸಕ ಅಬ್ಬಯ್ಯ ಅವರೇ ನಿಮ್ಮ ಮನೆಗೆ ಬೇಕಾದ್ರೆ ಟಿಪ್ಪು ಹೆಸರು ಇಟ್ಟುಕೊಳ್ಳಿ. ನಾವು ನಿಮ್ಮ ಊರಿನ ಬೀದಿಗೂ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಾಯಕರಿಗೆ ಟಿಪ್ಪು ಬಗ್ಗೆ ಅಷ್ಟು ಅಭಿಮಾನವಿದ್ದರೆ ನಿಮ್ಮ ಕಚೇರಿಗೆ ಟಿಪ್ಪು ಹೆಸರಿಟ್ಟುಕೊಳ್ಳಿ. ನಾವ್ಯಾರೂ ಬೇಡ ಅನ್ನಲ್ಲ. ಆದರೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದು ಬೇಡ. ಮೈಸೂರು ವಿಮಾನ ನಿಲ್ದಾಣಕ್ಕೆ ಸೂಕ್ತ ಹೆಸರು ನಾಲ್ವಡಿ ಕೃಷರಾಜ ಒಡೆಯರ್ ಹೆಸರು. ಮಡಿಕೇರಿ ಜನರಿಗೆ ಕೇಳಿ ಟಿಪ್ಪು ಏನು ಮಾಡಿದ್ದಾನೆ ಹೇಳುತ್ತಾರೆ. ಯಾವ ಕಾರಣಕ್ಕೂ ವಿಮನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಬಿಡಲ್ಲ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular