HomeUncategorizedBREAKING: ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಾಳು ಮಹಿಳೆ ಚಿಕಿತ್ಸೆ ಫಲಿಸದೆ ಸಾವು

BREAKING: ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಾಳು ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಮೈಸೂರು: ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಅರಮನೆಯ ಜಯಮಾರ್ತಾಂಡ ಗೇಟ್ ಬಳಿ ನಿನ್ನೆ ಬಲೂನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಳಿ ಇದ್ದ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರಾಟ ಮಾಡುತ್ತಿದ್ದ ಸಲೀಂ ಮೃತಪಟ್ಟಿದ್ದರು. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮಂಜುಳಾ ಮೃತ ಮಹಿಳೆ. ಗಾಯಾಳು ಮಂಜುಳಾ ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದರು. ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಂಜುಳಾ ಹೂವಿನ ವ್ಯಾಪಾರ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ನಂಜನಗೂಡಿನಿಂದ ಮೈಸೂರಿಗೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದ್ದು, ಉಳಿದ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular