HomeLatest NewsBREAKING: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

BREAKING: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಬದನಾಳು ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಹೊಸಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಬದನಾಳು ಗ್ರಾಮದ ಚಂದನ್ (8) ಹಾಗೂ ಆರ್ಯ (10) ಮೃತ ಬಾಲಕರು. ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಕೆರೆ ಬಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಬದನಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular