HomeLatest NewsBIG NEWS: ಜಾನುವಾರು ರಕ್ಷಣೆ ಹೆಸರಲ್ಲಿ ಹಣ ವಸೂಲಿ: 7 ಆರೋಪಿಗಳು ಅರೆಸ್ಟ್

BIG NEWS: ಜಾನುವಾರು ರಕ್ಷಣೆ ಹೆಸರಲ್ಲಿ ಹಣ ವಸೂಲಿ: 7 ಆರೋಪಿಗಳು ಅರೆಸ್ಟ್

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ, ಓರ್ವ ಮಹಿಳೆ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪದಲ್ಲಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆಡು ಈ ಗ್ಯಾಂಗ್ ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ರತ್ನಪುರಿಯ ಕಿರಣ್ ಎಂಬುವವರು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು. ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಹುಣಸೂರಿನ ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ? ಎಂದು ಚಾಲಕ ಕಿರಣ್ ನನ್ನು ಬೆದರಿಸಿ 25 ಸಾವಿರ ಹಣಕ್ಕೆ ಬೇದಿಕೆ ಇಟ್ಟಿದ್ದರು. ವ್ಯವಸಾಯಕ್ಕೆ ಜಾನುವಾರು ಸಾಗಿಸುತ್ತಿರುವುದಾಗಿ ಹೇಳಿದರೂ ಬಿಟ್ಟಿಲ್ಲ. ಬಳಿಕ 20 ಸಾವಿರ ಹಣ ಕೊಟ್ಟರೆ ಬಿಡುವುದಾಗಿ ಧಮ್ಕಿ ಹಾಕಿದ್ದರು. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಸೇರಿದ್ದು, ಆರೋಪಿಯನ್ನು ಪ್ರಶ್ನಿಸಿ ಗೂಸಾ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಕಿರಣ್ ನೀಡಿದ ದೂರಿನ ಮೇರೆಗೆ ಇದೀಗ ರಾಮಕೃಷ್ಣ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular