HomeKarnatakaBIG NEWS: ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣ; 19 ಜನರಿಗೆ ಗಾಯ; ಇಬ್ಬರ...

BIG NEWS: ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣ; 19 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ರೈಲು ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದರು.

ಅದೃಷ್ಟವಶತ ಯಾವುದೇ ಸಾವು ನೋವು ಸಂಭವಿಸಿಲ್ಲ. ಹೆಚ್ಚಿನ ಅನಾಹುತವಾಗಿಲ್ಲ. ಎಲ್ಲಾ ಪ್ರಯಾಣಿಕರನ್ನು ಮೆಮು ರೈಲಿನ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರು ಎಲ್ಲಿಗೆ ಹೋಗಬೇಕು ಅಲ್ಲಲ್ಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವ ಕಾರಣಕ್ಕೆ ರೈಲು ಅಪಘಾತವಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೈಸೂರಿನಿಂದ ಹೊರಟಿದ್ದ ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ರಾತ್ರಿ ಚನ್ನೈ ಬಳಿ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಸುಮಾರು 12 ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular