BIG NEWS: ಮೈಸೂರು ದಸರಾ-2023: ಯುವ ದಸರಾ ಲೋಗೋ ಅನಾವರಣ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ನಡುವೆ ಯುವ ದಸರಾ ಕಾರ್ಯಕ್ರಮದ ಲೋಗೋ ಅನಾವರಣ ಮಾಡಲಾಗಿದೆ.

ಮೈಸೂರು ಮಹಾರಾಜಾ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ ಯುವ ದಸರಾ ಲೋಗೋ ಅನಾವರಣ ಮಾಡಿದರು.

ಅಕ್ಟೋಬರ್ 18, 19, 20 ಹಾಗೂ 21ರಂದು ನಾಲ್ಕು ದಿನಗಳ ಕಾಲ ಯುವ ದಸರಾ ನಡೆಯಲಿದೆ. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಪ್ರತಿಬಾರಿ ಬಾಲಿವುಡ್ ಗಾಯಕರು, ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿತ್ತು. ಆದರೆ ಈ ಬಾರಿ ಸ್ಥಳೀಯ ಕಲಾವಿದರಿಗೆ ಅವಕಾಶಕೊಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read