Mysore Dasara : ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ : ಎಲ್ಲಾ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯಧುವೀರ್

ಬೆಂಗಳೂರು : ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ರಾಜ ಯಧುವೀರ್ ಒಡೆಯರ್ ಅರಮನೆ ಸಂಪ್ರದಾಯದಂತೆ ಆಯುಧಗಳಿಗೆ ಪೂಜೆ ಸಲ್ಲಿಸಿದ್ದಾರೆ.

ಕತ್ತಿ ಗುರಾಣಿ, ಫಿರಂಗಿ ಸೇರಿದಂತೆ ಎಲ್ಲಾ ಶಸ್ತ್ರಾಸ್ತ್ರಗಳಿಗೆ ಪೂಜೆ ಯಧುವೀರ್ ಒಡೆಯರ್ ಪೂಜೆ ಸಲ್ಲಿಸಿದ್ದಾರೆ. ಆಯುಧಗಳಿಗೆ ಪೂಜೆ ಸಲ್ಲಿಸಿದ ಬಳಿಕ ಪಟ್ಟದ ಹಸು, ಪಟ್ಟದ ಆನೆ, ಪಟ್ಟದ ಕುದುರೆಗೆ ಪೂಜೆ. ರಾಜ ಮನೆತನದ ವಾಹನಗಳಿಗೂ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ದಸರಾ ಹಬ್ಬದ ಒಂಬತ್ತನೇ ದಿನ ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಪೂಜಿಸಲಾಗುತ್ತದೆ. ಅಶ್ವಿನಿ ಮಾಸದ ಶುಕ್ಲಪಕ್ಷದ ನವಮಿ ದಿನ ಶಸ್ತ್ರಾಸ್ತ್ರ, ವಾಹನ ಹಾಗೂ ಯಂತ್ರಗಳ ಪೂಜೆಯನ್ನು ಮಾಡಿದರೆ ಶುಭವಾಗಲಿದೆ ಎಂದು ನಂಬಲಾಗುತ್ತದೆ.

ಮೈಸೂರು ದಸರಾ ಸಂಭ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಳ್ಳಲಿರುವ ಸಿಎಂ ಇಂದು ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read